ಜೂಡಿ ನ್ಯೂಸ್ :
ವಸತಿ ಶಾಲೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಒಂಬತ್ತನೇ ತರಗತಿ ವಿದ್ಯಾರ್ಥಿನಿ ..!
ಶಹಾಪುರ : ನಗರದ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ವಸತಿ ಶಾಲೆಯ ಶೌಚಾಲಯದಲ್ಲಿ ಬುಧವಾರ ಮಧ್ಯಾಹ್ನ 2:30ರ ಸುಮಾರಿಗೆ ಬಾಲಕಿಗೆ ಹೆರಿಗೆಯಾಗಿದೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೂ ತರಲಿಲ್ಲ ಬೇರೆ ಮೂಲಗಳಿಂದ ಗಮನಕ್ಕೆ ಬಂದಿದ್ದು ಕ್ರಮಕ್ಕೆ ಮುಂದಾಗಿದ್ದೇವೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ತಿಳಿಸಿದರು.
ಬಾಲಕಿ ಮತ್ತು ಮಗು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯವಾಗಿದ್ದಾರೆ. ಈ ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ಧರಿಸಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ದೂರವಾಣಿ ಮೂಲಕ ಮಾತನಾಡಿ ಘಟನೆ ಕುರಿತು ಪ್ರಕರಣ ದಾಖಲು ಮಾಡುವಂತೆ ಸೂಚಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ವಿಸ್ತೃತ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಲಾಗಿದೆ.
ಇನ್ನು ಮಗುವಿಗೆ ಜನ್ಮ ನೀಡಿದ ಸಂಗತಿ ಹೊರಬೀಳುತ್ತಿದ್ದಂತೆ ಅಧಿಕಾರಿಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
More Stories
ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಸೆ. 18 ರಂದು ಆರೋಗ್ಯ ತಪಾಸಣಾ ಶಿಬಿರ
ದಾನಿ ಸುಬ್ಬಾರೆಡ್ಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಹಂಪಾಪಟ್ಟಣ ನಾಗರಿಕರು..
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆ