ಜೂಡಿ ನ್ಯೂಸ್ :
ಕೊಪ್ಪಳ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಡಿ 31 ಬೆಳಗ್ಗೆ 6 ಗಂಟೆಯಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಿದ್ದತೆ ನಡೆದಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಯು.ಎಸ್.ಸೊಪ್ಪಿಮಠ ವಕೀಲರು ಹೇಳಿದರು.
ಮುಂದುವರೆದು ಮಾತನಾಡಿ ಕೆ,ಎಸ್,ಆರ್, ಟಿ,ಸಿ, ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ (ಎಐಟಿಯುಸಿ ಸಂಯೋಜಿತ), ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ (ಸಿಐಟಿಯು ಸಂಯೋಜಿತ)
ಕ,ರಾ,ರ,ಸಾ,ಸಂಸ್ಥೆ ಪ,ಜಾ, ಮತ್ತು ಪ, ಪಂ, ನೌಕರರ ಸಂಘ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ, ಜಾ,/ಪ, ಪಂ, ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ (ರಿ) ನಾಲ್ಕೂ ಸಾರಿಗೆ ನಿಗಮಗಳ ಒಳಗೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ದಿನಾಂಕ 25.01.2024 ರಂದೆ ಸಾರಿಗೆ ನಿಗಮಗಳು ಸಮಸ್ತ ನೌಕರರ ಪರವಾಗಿ ಬೇಡಿಕೆಗಳ ಪಟ್ಟಿಯನ್ನು ಸಾರಿಗೆ ನಿಗಮಗಳ ಆಡಳಿತ ವರ್ಗ ಹಾಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು,
ಹಲವಾರು ಬಾರಿ ಆಡಳಿತ ವರ್ಗ ಹಾಗೂ ಸಾರಿಗೆ ಸಚಿವರಿಗೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ ಮಾಡಿದೆ, ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈಗಾಗಲೇ ಹಲವಾರು ಪತ್ರಗಳನ್ನು ಬರೆಯಲಾಗಿದೆ, ಆದರೂ ಈ ವರೆಗೂ ಸರ್ಕಾರದಿಂದಾಗಲಿ ಅಥವಾ ಸಾರಿಗೆ ನಿಗಮಗಳ ಆಡಳಿತ ವರ್ಗದಿಂದಾಗಲಿ ಯಾವುದೇ ಸ್ಪಂದನೆ ಇಲ್ಲದಿರುವುದು ಕಾರ್ಮಿಕರಿಗೆ ಅತೀವ ನಿರಾಶೆ ತಂದಿದೆ,
ರಾಜ್ಯದಲ್ಲಿ ಪ್ರತಿದಿನ ಸುಮಾರು ಒಂದು ಕೋಟಿಗೂ ಹೆಚ್ಚಿನ ಜನರನ್ನು ತಲುಪಿಸುವುದು ಹಾಗೂ ಶಕ್ತಿ ಯೋಜನೆಯ ಮೂಲಕ ತಮ್ಮ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದು ಕೊಟ್ಟಿರುವ ನಾಲ್ಕೂ ಸಾರಿಗೆ ನಿಗಮಗಳ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯ ನೌಕರರ ಬೇಡಿಕೆಗಳ ಬಗ್ಗೆ ತಮ್ಮ ಸರ್ಕಾರ ನಿರ್ಲಕ್ಷ ಧೋರಣೆ ತಳೆದಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ, ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲು ಸಾರಿಗೆ ನೌಕರರ ಪರವಾಗಿ ನಮ್ಮ ಜಂಟಿ ಕ್ರಿಯಾ ಸಮಿತಿಯು ದಿನಾಂಕ 13.8.2024 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶ ಹಾಗೂ ದಿನಾಂಕ 28,8,2024 ರಂದು ಹುಬ್ಬಳ್ಳಿಯಲ್ಲಿ ಎನ್,ಡಬ್ಲ್ಯೂ, ಕೆ,ಆರ್,ಟಿ,ಸಿ, ನಿಗಮ ಮಟ್ಟದ ಸಮಾವೇಶಗಳ ಮೂಲಕ ಶಾಂತಿಯುತವಾಗಿ ಪ್ರಜಾಪ್ರಭುತ್ವ ರೀತಿಯಲ್ಲಿ ಚಳುವಳಿಯ ಸಿದ್ಧತೆಯನ್ನು ನಡೆಸಿದೆ,
ಬೆಳ್ಳೂರಿನ ಸ್ವತಂತ್ರ ಉದ್ಯಾನವನದಲ್ಲಿ ದಿkನಾಂಕ 12.09.2024 ರಂದು ಗುರುವಾರ ರಾಜ್ಯದಾದ್ಯಂತ ಬಂದಿದ್ದ ಸಾವಿರಾರು ಕಾರ್ಯಕರ್ತರು ಒಂದು ದಿನದ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಕೆ,ಎಸ್,ಆರ್,ಟಿ,ಸಿ, ವ್ಯವಸ್ಥಾಪಕರ ಮೂಲಕ ಮುಖ್ಯಮಂತ್ರಿ ಅವರನ್ನು ಮನವಿ ಸಲ್ಲಿಸಿ ದಿನಾಂಕ 26.9.2024 ವರೆಗೆ ಬೇಡಿಕೆಗಳ ಈಡೇರಿಕೆಗೆ ಕಾಲಾವಕಾಶ ನೀಡಲಾಗಿತ್ತು,
ಅಲ್ಲದೆ ದಿನಾಂಕ 09.10.2024 ರಂದು ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಸಾರಿಗೆ ಸಚಿವ ರಾಮ್ಲಿಂಗ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಡಳಿತ ವರ್ಗದವರು ಸ್ಪಷ್ಟವಾಗಿ ಪ್ರಯಾಣ ದರ ಪರಿಷ್ಕರಣೆಯಾಗದೆ ವೇತನ ಪರಿಷ್ಕಣೆ ಕಷ್ಟ ಸಾಧ್ಯ ಎಂಬ ಸಂದೇಶವನ್ನು ಕೊಟ್ಟಿರುತ್ತಾರೆ, ಸಾರಿಗೆ ನೌಕರರ ಬೇಡಿಕೆಗಳಾದ ದಿನಾಂಕ 31.12.2023ರ ಮೂಲವೇತನದ ಶೇಕಡ 25 ರಷ್ಟು ಹೆಚ್ಚಳ ಮಾಡಿ ದಿನಾಂಕ 01.01.2024 ರಿಂದ ವೇತನ ಶ್ರೇಣಿಗಳನ್ನು ಸಿದ್ಧಪಡಿಸತಕ್ಕದ್ದು,
ಇಂಕ್ರಿಮೆಂಟ್ ದರ ಎಲ್ಲಾ ಹಂತಗಳಲ್ಲೂ ಮೂಲವೇತನದ ಶೇ, 4 ರಷ್ಟು ಇರತಕ್ಕದ್ದು, 01. 01.2020 ರಿಂದ ಆಗಿರುವ ಶೇಕಡ 15 ರಷ್ಟು ವೇತನ ಹೆಚ್ಚಳದ 38 ತಿಂಗಳ ಬಾಕಿ ಹಣ ವಿಳಂಬವಿಲ್ಲದೆ ಪಾವತಿಸಬೇಕು, ಆಯ್ಕೆ ಶ್ರೇಣಿ ಹಾಗೂ ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನೂ ಸಹ ಮೇಲೆ ತಿಳಿಸಿರುವ ರೀತಿಯಲ್ಲಿಯೇ ಸಿದ್ಧಪಡಿಸತಕ್ಕದ್ದು, ಆಯ್ಕೆ ಶ್ರೇಣಿಯ ವಾರ್ಷಿಕ ವೇತನ ಬಡ್ತಿ ಹಾಗೂ ಉನ್ನತ ಶ್ರೇಣಿಗಳ ವಾರ್ಷಿಕ ವೇತನ ಬಡ್ತಿಯೂ ಆಯಾ ವೇತನ ಶ್ರೇಣಿಯ ಮೂಲ ವೇತನದ ಶೇ,4ರಷ್ಟು ಇರತಕ್ಕದ್ದು,
ಆಯ್ಕೆ ಶ್ರೇಣಿ ಬಡ್ತಿಯನ್ನು ಸೇವಾ ಅವಧಿಯ ಪ್ರತಿ 10 ವರ್ಷಕ್ಕೊಮ್ಮೆ ನೀಡಬೇಕು, ಯಾವುದೇ ಸಂದರ್ಭದಲ್ಲಿಯೂ ಆಯ್ಕೆ ಶ್ರೇಣಿ/ಉನ್ನತ ಶ್ರೇಣಿಯ ವಾರ್ಷಿಕ ವೇತನ ಬಡ್ತಿಯ ಸಾಮಾನ್ಯ ಶ್ರೇಣಿಯ ಕೊನೆಯ ಹಂತದ ವಾರ್ಷಿಕ ವೇತನ ಬಡ್ತಿಯ ಮೊತ್ತಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರತಕ್ಕದ್ದು, ಶಕ್ತಿ ಯೋಜನೆಯ ಸಂಪೂರ್ಣ ಅನುದಾನವನ್ನು ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಕೂಡಲೇ ಪಾವತಿಸಬೇಕು, ದಿನಾಂಕ : 08.08.2023 ರಂದು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಸಲ್ಲಿಸಿರುವ ಬೇಡಿಕೆಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದಿರುವ ನೌಕರರು ಪ್ರಸಕ್ತ ಪಡೆಯುತ್ತಿರುವ ವಿವಿಧ ಭತ್ಯೆಗಳನ್ನು ಐದು ಪಟ್ಟು ಹೆಚ್ಚಳ ಮಾಡಬೇಕು,
ವೈದ್ಯಕೀಯ ಸೌಲಭ್ಯ, ಎಲ್ಲ ನೌಕರರಿಗೂ ಪ್ರತಿ ತಿಂಗಳೂ ಹೊರ ರೋಗಿ ಚಿಕಿತ್ಸೆ ವೆಚ್ಚಕ್ಕಾಗಿ ರೂ, 2000 ನೀಡಬೇಕು, ಎಲ್ಲಾ ನೌಕರರಿಗೂ ಉಚಿತ ಔಷಧಿ ಪೂರೈಸಬೇಕು, ಈ ಎಸ್ ಐ ಮಾದರಿಯಲ್ಲಿ ಆಡಳಿತ ವರ್ಗದವರಿಂದ ನೌಕರರ ಮೂಲವೇತನದ ಶೇಕಡ 4.5 ಹಾಗೂ ನೌಕರರಿಂದ ಶೇಕಡ 0.5 ವಂತಿಗೆ ಸಂಗ್ರಹಿಸಿ ಟ್ರಸ್ಟ್ ರಚಿಸಿ, ಈ ಮೂಲಕ ಸಾರಿಗೆ ನೌಕರರಿಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ (ನಗದು ರಹಿತ) ಚಿಕಿತ್ಸೆ ನೀಡುವಂತೆ ಯೋಜನೆ ರೂಪಿಸಬೇಕು,
ಈ ಎಲ್ಲಾ ಸೌಲಭ್ಯಗಳು ನಿವೃತ್ತ ಕಾರ್ಮಿಕರಿಗೆ ಅವರ ಪತಿ-ಪತ್ನಿ ಹಾಗೂ ಮಕ್ಕಳಿಗೂ ನೀಡಬೇಕು, ಸಾರಿಗೆ ನಿಗಮಗಳ ವಿದ್ಯುತ್ ಬಸ್ ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು, ಗುತ್ತಿಗೆ ಆಧಾರದಲ್ಲಿ ತೆಗೆದುಕೊಂಡಿರುವ ಚಾಲಕ/ ತಾಂತ್ರಿಕ ಸಿಬ್ಬಂದಿಗಳನ್ನು ಸಂಸ್ಥೆಯ ನೌಕರರನ್ನಾಗಿ ನೇಮಿಸಿಕೊಳ್ಳಬೇಕು, ಪ್ರಸ್ತುತ ವೇತನ ಪರಿಷ್ಕರಣೆಯು ದಿನಾಂಕ 01.01.2024 ರಿಂದ 31.12.2027 ರ ವರೆಗೆ ನಾಲ್ಕು ವರ್ಷಗಳ ಕಾಲ ಜಾರಿಯಲ್ಲಿರತಕ್ಕದ್ದು,
ನಾಲ್ಕೂ ಸಾರಿಗೆ ನಿಗಮಗಳಲ್ಲಿ ಸಿಬ್ಬಂದಿಗಳ ನೇಮಕಾತಿಯನ್ನು ಬೇಗ ಮುಗಿಸಿ,ಎಲ್ಲಾ ನಿಗಮಗಳಲ್ಲೂ ನೌಕರರ ಮುಂಬಡ್ತಿಗೆ ಕ್ರಮ ತೆಗೆದುಕೊಳ್ಳಬೇಕು, ಶಕ್ತಿ ಯೋಜನೆಯಿಂದ ಚಾಲಕ/ನಿರ್ವಾಹಕರಿಗೆ ಆಗುತ್ತಿರುವ ಶಿಕ್ಷೆ ಮತ್ತು ಕಿರುಕುಳಗಳ ಬಗ್ಗೆ ಅಲಾಹಿತ ಟಿಪ್ಪಣಿ ಕೊಡುತ್ತಿದ್ದೇವೆ ಅಲ್ಲದೆ ಆಡಳಿತ ವರ್ಗಕ್ಕೆ ಸಲ್ಲಿಸಿರುವ ಎಲ್ಲಾ ಬೇಡಿಕೆಗಳನ್ನು ಜಂಟಿ ಕ್ರಿಯಾ ಸಮಿತಿ ಜೊತೆ ಚರ್ಚಿಸಿ ಪರಿಹರಿಸಬೇಕು,
ನಮ್ಮ ಬೇಡಿಕೆಗಳು ಈಡೇರದಿದ್ದಲ್ಲಿ ದಿನಾಂಕ 31.12.2024 ರಂದು ಮಂಗಳವಾರ ಬೆಳಿಗ್ಗೆ 6:00ಯಿಂದ ಅನಿರ್ಧಿಷ್ಟಾವಧಿ ಮುಷ್ಕರ ಪ್ರಾರಂಭವಾಗುತ್ತದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಯು. ಎಸ್.ಸೊಪ್ಪಿಮಠ ವಕೀಲರು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸಂಚಾಲಕರುಗಳಾದ ಎ,ಬಿ,ದಿಂಡೂರ, ಹನುಮಂತಪ್ಪ ಅಂಬಿಗೇರ್, ಎಸ್,ಎ,ಗಫಾರ್. ಮಖಬೂಲ್ ರಾಯಚೂರು ಮುಂತಾದವರು ಉಪಸ್ಥಿತರಿದ್ದರು.
More Stories
ಗ್ರಾಮ ಪಂಚಾಯತಿ ಸದಸ್ಯನ ಸಂಭಾವನೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ…
ಮಠ-ಮಂದಿರಗಳಿಗೆ ಮಂಜೂರಾದ ಅನುದಾನ ಬಿಡುಗಡೆಗೆ 25% ಕಮೀಷನ್: ಜಿ. ಜನಾರ್ಧನ ರೆಡ್ಡಿ ಗಂಭೀರ ಆರೋಪ
ಹಂಪಾಪಟ್ಟಣದಲ್ಲಿ ಮೊಹರಂ ವಿಶೇಷ ಆಚರಣೆ