July 13, 2025

ಅಕ್ಷರ ಶಾಲಾ ಮಕ್ಕಳಿಗೆ ಕೃಷಿ ಪಾಠ: ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು

ಜೂಡಿ ನ್ಯೂಸ್ :

ಗಂಗಾವತಿ : ಅಕ್ಷರ ಪಬ್ಲಿಕ್ ಶಾಲೆಯ ಮಕ್ಕಳು ಚಟುವಟಿಕೆಯೊಂದನ್ನು ನಡೆಸಿದರು. ರಾಂಪುರ್ ಹಳ್ಳಿಯ ಭತ್ತದ ಗದ್ದೆಯಲ್ಲಿ ಉಳುಮೆ, ಸಸಿ ನಾಟಿ ಕೆಲಸದಲ್ಲಿ ಮಕ್ಕಳು ಭಾಗವಹಿಸಿ ಕೃಷಿ ಕಾರ್ಯದ ಅನುಭವ ಪಡೆದರು.

ಅಕ್ಷರ ಪಬ್ಲಿಕ್ ಶಾಲೆಯ ನರಸರಿ, ಎಲ್ ಕೆ ಜಿ, ಯುಕೆಜಿ, ಒಂದು ಮತ್ತು ಎರಡನೇ ತರಗತಿ ಮಕ್ಕಳನ್ನು ಗದ್ದೆಗೆ ಇಳಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸುವ ಮೂಲಕ ವಿಭಿನ್ನವಾಗಿ ಪಾಠ ಮಾಡಲಾಗಿದೆ.

ಅಕ್ಷರ ಪಬ್ಲಿಕ್ ಶಾಲೆಯ ಮಕ್ಕಳಿಗೆ ಗದ್ದೆ ಎಂದರೆ ಏನು?, ಬೇಸಾಯ ಎಂದರೆ ಹೇಗೆ?, ನಾಟಿ ಹೇಗೆ ಮಾಡಬೇಕು ಎಂದೆಲ್ಲ ಮಾಹಿತಿ ನೀಡುತ್ತಾ ಮಕ್ಕಳನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಲಾಗಿತ್ತು. ಮಕ್ಕಳು ಗದ್ದೆಯಲ್ಲಿ ನಾಟಿ ಮಾಡುವುದು ಎಲ್ಲರ ಗಮನ ಸೆಳೆಯಿತು.

ಸಂಸ್ಥೆಯ ಅಧ್ಯಕ್ಷ ರವಿ ಚೈತನ್ಯ ರೆಡ್ಡಿ ಮಾತನಾಡಿ ತರಗತಿಯಲ್ಲಿ ಪಾಠ ಮಾಡುವುದಕ್ಕಿಂತ, ಪ್ರಾಯೋಗಿಕವಾಗಿ ತೋರ್ಪಡಿಸುವುದರಿಂದ, ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿಯನ್ನು ಮನದಟ್ಟು ಮಾಡಲು ಸಾಧ್ಯ ಎಂಬ ಆಶಯದೊಂದಿಗೆ ಸ್ಥಳೀಯರ ಸಹಕಾರದಲ್ಲಿ ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಕೃಷಿ ಶಿಕ್ಷಣವನ್ನು ನೀಡಲಾಯಿತು. ಪಠ್ಯದಲ್ಲಿರುವ ಕೃಷಿ ಚಟುವಟಿಕೆ ಪಾಠ ಮಾಡಬೇಕಿದ್ದ ಶಿಕ್ಷಕರು ವಿದ್ಯಾರ್ಥಿಗಳನ್ನು ನೇರವಾಗಿ ಭತ್ತದ ಗದ್ದೆಗೆ ಕರೆದುಕೊಂಡು ಭತ್ತದ ನಾಟಿ ಮಾಡುವ ಪ್ರಾತ್ಯಕ್ಷಿಕೆ ತೋರಿಸಿದ್ದಾರೆ. ರೈತರ ಪರಿಶ್ರಮವನ್ನು ಅರಿತ ವಿದ್ಯಾರ್ಥಿಗಳು ಗದ್ದೆಯಲ್ಲಿ ಭತ್ತ ನಾಟಿ ಮಾಡುವ ಪಾಠವನ್ನು ಮಾಡುತ್ತಿರುವ ಸಂದರ್ಭದಲ್ಲಿ ಹಲವು ಪ್ರಶ್ನೆಗಳನ್ನು ಕೇಳಿ, ತಮ್ಮಲ್ಲಿರುವ ಅನುಮಾನಗಳನ್ನು ಬಗೆಹರಿಸಿಕೊಂಡರು

 ಈ ಸಂದರ್ಭದಲ್ಲಿ ಮುಖ್ಯ ಉಪಾಧ್ಯಾಯನಿ ಹಿಮಾರೆಡ್ಡಿ, ಶಿಕ್ಷಕ ವೃಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.