July 13, 2025

ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅವರ ಕೊಪ್ಪಳ ಜಿಲ್ಲಾ ಪ್ರವಾಸ

ಜೂಡಿ ನ್ಯೂಸ್ :

ಕೊಪ್ಪಳ ಜನವರಿ 02 : ಕರ್ನಾಟಕ ವಿಧಾನ ಪರಿಷತ್ತಿನ ಸಭಾ ನಾಯಕರು ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ಜನವರಿ 3 ಮತ್ತು 4 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

 ಸಚಿವರು ಜ. 3 ರಂದು ಬೆಳಿಗ್ಗೆ 10 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ, ಕೊಪ್ಪಳ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳ ಪರಿವೀಕ್ಷಣೆ ಮಾಡುವರು. ನಂತರ 10.30ಕ್ಕೆ ನಾರಾಯಣಪೇಟೆಯಲ್ಲಿ ಕೊಪ್ಪಳ-ಯಲಬುರ್ಗಾ ಕೆರೆ ತುಂಬಿಸುವ ಯೋಜನೆಯ ಮೊದಲನೇ ಹಂತದ ಕಾಮಗಾರಿಯ ಜಾಕ್‌ವೆಲ್ & ಪಂಪ್ ಹೌಸ್ ಪರಿವೀಕ್ಷಣೆ ನಡೆಸುವರು. 11 ಗಂಟೆಗೆ ಶಿವಪುರ-ಹುಲಿಗಿ ಗ್ರಾಮದ ಹತ್ತಿರ ಕೊಪ್ಪಳ ಹಿರೇಹಳ್ಳ ಏತ ನೀರಾವರಿ ಯೋಜನೆ ಹಾಗೂ ಕೆರೆ ತುಂಬಿಸುವ ಕಾಮಗಾರಿಯ ಜಾಕ್‌ವೆಲ್ & ಪಂಪ್ ಹೌಸ್ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 12 ಗಂಟೆಗೆ ಬಾಣಾಪುರದಲ್ಲಿ ಕೊಪ್ಪಳ-ಯಲಬುರ್ಗಾ ಕೆರೆ ತುಂಬಿಸುವ ಏತ ನೀರಾವರಿ ಯೋಜನೆ ಕಾಮಗಾರಿಯ ಜಾಕ್‌ವೆಲ್ & ಪಂಪ್ ಹೌಸ್ ಪರಿವೀಕ್ಷಣೆ ನಡೆಸುವರು. ಮಧ್ಯಾಹ್ನ 3.30ಕ್ಕೆ ಕಡೆಕೊಪ್ಪ ಗ್ರಾಮದಲ್ಲಿ ಕುಷ್ಟಗಿ ಏತ ನೀರಾವರಿ ಯೋಜನೆ ಹಾಗೂ ಕೆರೆ ತುಂಬಿಸುವ ಕಾಮಗಾರಿಯ 2ನೇ ಹಂತದ ಜಾಕ್‌ವೆಲ್ & ಪಂಪ್ ಹೌಸ್ ಪರಿವೀಕ್ಷಣೆ ಮಾಡಿದ ಬಳಿಕ ಸಂಜೆ 5 ಗಂಟೆಗೆ ಅಲ್ಲಿಂದ ನಿರ್ಗಮಿಸಿ, ಹೊಸಪೇಟೆಯ ವೈಕುಂಠ ಅತಿಥಿ ಗೃಹಕ್ಕೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ.

 ಜನವರಿ 4ರಂದು ಬೆಳಿಗ್ಗೆ 9 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ, ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 9.30ಕ್ಕೆ ಕೊಪ್ಪಳ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದ ನಂತರ 10.30ಕ್ಕೆ ಸಣ್ಣ ನೀರಾವರಿ ಇಲಾಖೆಯ ಕೊಪ್ಪಳ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಪಕ್ಷದ ಕಛೇರಿಗೆ ಭೇಟಿ ನೀಡುವರು. ನಂತರ ಅಂದು ಸಂಜೆ 4 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.