July 12, 2025

ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ

ಜೂಡಿ ನ್ಯೂಸ್ :

ಶ್ರೀರಾಮನಗರ: ಗಂಗಾವತಿ ತಾಲೂಕಿನ ಶ್ರೀರಾಮನಗರದ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ೨೦೨೪-೨೫ನೆಯ ಸಾಲಿನ ೭ನೆಯ ತರಗತಿಯಿಂದ ೯ನೆಯ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು “ಸಿರಿ” ಎಂಬ ಶೀರ್ಷಿಕೆಯ ಅಡಿಯಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶ್ರೀ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಯುತ ನೆಕ್ಕಂಟಿ ಸೂರಿಬಾಬು ಅವರು ಸ್ವಾವಲಂಬಿ ವಿದ್ಯಾರ್ಥಿ- ಜವಾಬ್ದಾರಿಯುತ ಶಿಕ್ಷಣ ಎಂಬ ಧ್ಯೇಯದೊಂದಿಗೆ ನಮ್ಮ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದ್ದು, ಜಾಗತಿಕ ಮಟ್ಟಕ್ಕೆ ಸರಿ ಸಮಾನವಾದ ಎಲ್ಲಾ ಶೈಕ್ಷಣಿಕ ಸೌಲಭ್ಯ ಮತ್ತು ಸಂಪನ್ಮೂಲಗಳನ್ನು ಶಾಲೆಯಲ್ಲಿ ಒದಗಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಇವುಗಳ ಸದುಪಯೋಗ ಪಡೆದುಕೊಂಡು ಉನ್ನತವಾದ ಸಾಧನೆಯನ್ನು ಗೈಯಬೇಕು.

ಅದೇ ರೀತಿ ನಮ್ಮ ನಾಡು ಉತ್ತಮ ಪರಂಪರೆ ಮತ್ತು ಸಂಸ್ಕೃತಿಯನ್ನು ಹೊಂದಿದ್ದು, ವಿದ್ಯಾರ್ಥಿಗಳೆಲ್ಲರೂ ಈ ಹಂತದಿAದಲೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿ ಸಂಸ್ಥೆಯ ಏಳಿಗೆಗೆ ಪಾಲಕರು, ಗುರು-ಹಿರಿಯರು ನೀಡಿದ ಸಹಕಾರ ಮತ್ತು ಪ್ರೋತ್ಸಾಹವನ್ನು ಸ್ಮರಿಸಿ, ಮುಂಬರುವ ದಿನಗಳಲ್ಲಿ ಸಂಸ್ಥೆಯ ವತಿಯಿಂದ ಕೈಗೊಳ್ಳುವ ಯೋಜನೆಗಳ ಕುರಿತು ಮಾತನಾಡಿದರು.
ನಂತರ ಮುಖ್ಯ ಅತಿಥಿಗಳಾದ, ಖ್ಯಾತ ವೈದ್ಯರು ಹಾಗೂ ಭಾರತೀಯ ವೈದ್ಯಕೀಯ ಸಂಘ ಗಂಗಾವತಿಯ ಅಧ್ಯಕ್ಷರಾದ ಡಾ.ಅಲ್ಲೂರಿ ಸತ್ಯನಾರಾಯಣ ರಾಜು ಅವರು ಮಾತನಾಡಿ, ಶಿಕ್ಷಣದ ಮಹತ್ವವನ್ನು ತಿಳಿಸಿ, ಶಿಕ್ಷಣ ಕ್ಷೇತ್ರಕ್ಕೆ ಶ್ರೀ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯು ಸಲ್ಲಿಸುತ್ತಿರುವ ಸೇವೆಯನ್ನು ಶ್ಲಾಘಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯು ಶ್ರೇಷ್ಠ ಸಾಧನೆಯನ್ನು ಮಾಡಲು ಪ್ರಯತ್ನಿಸಬೇಕು, ಇದಕ್ಕಾಗಿ ಸತತವಾದ ಪರಿಶ್ರಮವನ್ನು ಪಡಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತದನಂತರÀ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಹಕಾರ ಸಂಘಗಳ ಧುರೀಣಾರು ಹಾಗೂ ಪಿ.ಎಲ್.ಡಿ ಬ್ಯಾಂಕ್ ಗಂಗಾವತಿ ಅಧ್ಯಕ್ಷರಾದ ಶ್ರೀ ದೊಡ್ಡಪ್ಪ ದೇಸಾಯಿ ಅವರು ಮಾತಾನಾಡಿ ಕಲ್ಯಾಣ ಕರ್ನಾಟಕ ಭಾಗದ ನಮ್ಮ ಗಂಗಾವತಿಯು ಶೈಕ್ಷಣಿಕವಾಗಿ ಬೆಳವಣಿಗೆ ಹೊಂದಲು ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಂತರಾಷ್ಟಿçÃಯ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಶ್ರೀ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯು ಪ್ರಮುಖ ಪಾತ್ರವನ್ನು ವಹಿಸಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಅಮೋಘ ಸಾಧನೆ ಹಾಗೂ ಸೇವೆಯನ್ನು ಸಲ್ಲಿಸುತ್ತಿರುವ ಸಂಸ್ಥೆಯನ್ನು ಹಾಗೂ ಸಂಸ್ಥೆಯ ಅಧ್ಯಕ್ಷರ ಕಾರ್ಯವನ್ನು ಪ್ರಶಂಸಿಸಿದರು.
ಈ ಕಾರ್ಯಕ್ರಮದಲ್ಲಿ ಪಿ.ಎಲ್.ಡಿ ಬ್ಯಾಂಕ್ ಗಂಗಾವತಿಯ ನಿರ್ದೇಶಕರಾದ ಶ್ರೀ ರಮೇಶ್ ನಾಯಕ್, ಶ್ರೀರಾಮನಗರದ ಗ್ರಾಮ ಪಂಚಾಯತಿಯ ಸದಸ್ಯರಾದ ಶ್ರೀ ಸುಂಕಣ್ಣ ಹಾಗೂ ಶ್ರೀಮತಿ ಸುನಿತಾ ಶೇಖರ್, ಸಂಸ್ಥೆಯ ಶ್ರೇಯೋಭಿಲಾಷಿಗಳಾದ ಡಾ|| ವೆಂಕಟೇಶ, ಶ್ರೀ ಶಿವಪ್ಪ ನಾಯಕ, ಶ್ರೀ ಸುರೇಶ ಹೆಚ್, ಶಾಲೆಯ ಉಪಾಧ್ಯಕ್ಷರಾದ ಶ್ರೀ ನೆಕ್ಕಂಟಿ ಆದರ್ಶ್, ಶಾಲೆಯ ಆಡಳಿತ ನಿರ್ದೇಶಕರಾದ ಶ್ರೀ ಹೆಚ್. ಕೆ ಚಂದ್ರಮೋಹನ್, ಶಾಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ನರೇಶ್. ವೈ, ಶೈಕ್ಷಣಿಕ ಮುಖ್ಯಸ್ಥರಾದ ಶ್ರೀಮತಿ ಕೃಷ್ಣವೇಣಿ. ಎಸ್, ಶ್ರೀ ವಿದ್ಯಾನಿಕೇತನ ಪಿ.ಯು ಕಾಲೇಜ್‌ಗಳ ನಿರ್ದೇಶಕರು ಹಾಗೂ ಪ್ರಾಂಶುಪಾಲರಾದ ಶ್ರೀ ಕೆ.ಎಸ್. ಮಲ್ಲಿಕಾರ್ಜುನ್, ಶ್ರೀ ಎ. ಉಮಾಶಂಕರ್ ರಾವ್, ಶ್ರೀ ಟಿ. ಜಗನ್ನಾಥ್ ರಾವ್, ಕ್ಯಾಂಪಸ್ ಮ್ಯಾನೇಜರ್ ಶ್ರೀ ಜಿ. ನಾಗೇಶ್ವರ್‌ರಾವ್, ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸುಭದ್ರಾ ದೇವಿ, ಎಲ್ಲಾ ಪಾಲಕರು, ಶಾಲೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಂತರ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು