ಜೂಡಿ ನ್ಯೂಸ್ :
ಕೊಪ್ಪಳ, ಜ. 26 : ಕೊಪ್ಪಳದ ಸಾಂಪ್ರದಾಯಿಕ ಶಿಳ್ಳೇಕ್ಯಾತರ ಕುಟುಂಬದವರಾಗಿದ್ದು ತೊಗಲುಗೊಂಬೆ ಕಲಾವಿದರಾಗಿ ನಿರಂತರವಾಗಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪರದೆಯ ಹಿಂದೆ ಮಹಿಳಾ ಪಾತ್ರಗಳಿಗೆ ಧ್ವನಿ ತುಂಬುವ ಅಪರೂಪದ ಕಲಾವಿದೆಯಾದ ಭೀಮವ್ವ ದೊಡ್ಡಬಾಳಪ್ಪ ಅವರು ದೇಶ ವಿದೇಶಗಳಲ್ಲೂ ತಮ್ಮ ವೈವಿಧ್ಯಮಯ ತೊಗಲು ಗೊಂಬೆಯ ಪ್ರದರ್ಶನದಿಂದ ಪ್ರೇಕ್ಷಕರ ಮನಗೆದ್ದಿದ್ದಾರೆ. ಇಳಿ ವಯಸ್ಸಿನಲ್ಲಿಯೂ
ತೊಗಲುಗೊಂಬೆಯಾಟವನ್ನು ಮನಮುಟ್ಟುವಂತೆ ಪ್ರದರ್ಶಿಸುವ ಭೀಮವ್ವ ಅಮೇರಿಕ, ಇರಾನ್, ಸ್ವಿಡರ್‌ಲ್ಯಾಂಡ್ ಮೊದಲಾದ ಭಾರತದ ಪುರಾತನ ಕಲೆಯಾದ ತೊಗಲುಗೊಂಬೆಯಾಟವನ್ನು ಪ್ರದರ್ಶಿಸುವ ತಂಡಗಳಲ್ಲಿ ಪ್ರಮುಖ ಸದಸ್ಯೆಯಾಗಿದ್ದ ಭೀಮವ್ವ ತನ್ನ ಮಾತಿನ ಚಾಕಚಕ್ಯತೆಯಿಂದ ಹಾಗೂ ಸಮಯೋಚಿತ ಸಂಭಾಷಣೆಯಿಂದ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ.
ಕೊಪ್ಪಳ ತಾಲೂಕಿನ ಮೊರನಾಳ ಗ್ರಾಮದ ಭೀಮವ್ವ ದೊಡ್ಡಬಾಲಪ್ಪ ಶಿಳ್ಳೇಕ್ಯಾತ ಅವರಿಗೆ ಈಗ 96 ವರ್ಷ. 14ನೇ ವರ್ಷದಿಂದಲೇ ತೊಗಲುಗೊಂಬೆಯಾಟ ಪ್ರದರ್ಶನ ಆರಂಭ ಮಾಡಿದ್ದ ಭೀಮವ್ವ, ರಾಮಾಯಣ ಮಹಾಭಾರತದ ಮಹಾಕಾವ್ಯವನ್ನು ತೊಗಲುಗೊಂಬೆಯಾಟದ ಮೂಲಕ ಪ್ರದರ್ಶನ ನೀಡುತ್ತಾ ಬಂದಿದ್ದಾರೆ.
ವಿದೇಶದಲ್ಲಿಯೂ ಅವರು ತೊಗಲುಗೊಂಬೆಯಾಟದ ಪ್ರದರ್ಶನ ನೀಡಿದ್ದಾರೆ. 2014 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದ ಭೀಮವ್ವ ಶಿಳ್ಳೇಕ್ಯಾತ, ಜಾನಪದ ಮತ್ತು ಬಯಲಾಟ ಅಕಾಡೆಮಿ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿ, ಹಿರಿಯ ನಾಗಿರಕರ ಪ್ರಶಸ್ತಿಗೂ ಭಾಜನರಾಗಿದ್ದಾರೆ.
More Stories
ಗ್ರಾಮ ಪಂಚಾಯತಿ ಸದಸ್ಯನ ಸಂಭಾವನೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ…
ಮಠ-ಮಂದಿರಗಳಿಗೆ ಮಂಜೂರಾದ ಅನುದಾನ ಬಿಡುಗಡೆಗೆ 25% ಕಮೀಷನ್: ಜಿ. ಜನಾರ್ಧನ ರೆಡ್ಡಿ ಗಂಭೀರ ಆರೋಪ
ಹಂಪಾಪಟ್ಟಣದಲ್ಲಿ ಮೊಹರಂ ವಿಶೇಷ ಆಚರಣೆ