ಕೊಪ್ಪಳ : ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿ ನಾಮನಿರ್ದೇಶನ ಸದಸ್ಯರಾಗಿ ಕೃಷಿ ಉದ್ಯಮಿ ಮಹಾಂತೇಶಗೌಡ.ಬ. ಪಾಟೀಲ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಮಾಡಿದ್ದಾರೆ. ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರ ಅನುಮೋದನೆ ಮೇರೆಗೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಪ್ರಶಾಂತಕುಮಾರ್ ಅವರು ಮಹಾಂತೇಶಗೌಡ .ಬ.ಪಾಟೀಲ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ಸದಸ್ಯರಾಗಿ ನೇಮಕ ಮಾಡಿ ಆದೇಶ ಮಾಡಿದ್ದಾರೆ.
ಇನ್ನೂ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಲು ಕಾರಣರಾದ ಸಿಎಂ ಸಿದ್ದರಾಮಯ್ಯನವರು, ಡಿಸಿಎಂ ಡಿ.ಕೆ ಶಿವಕುಮಾರ್, ತೋಟಗಾರಿಕೆ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ, ಜಿಲ್ಲಾಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರೆಡ್ಡಿ, ಸಂಸದ ರಾಜಶೇಖರ ಹಿಟ್ನಾಳ, ಮಾಜಿ ಸಂಸದರಾದ ಕರಡಿ ಸಂಗಣ್ಣ,ಮಾಜಿ ಶಾಸಕರಾದ ಬಸವರಾಜ ಹಿಟ್ನಾಳ, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ, ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಶಾಸಕರು ಹಾಗೂ ಕಾಡಾ ಅಧ್ಯಕ್ಷರಾದ ಹಸನ್ ಸಾಬ್ ದೋಟಿಹಾಳ್, ಹೆಚ್.ಆರ್ ಶ್ರೀನಾಥ್,ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೆ ಮಹಾಂತೇಶಗೌಡ ಪಾಟೀಲ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ನನನ್ನು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ಆಡಳಿತ ಮಂಡಳಿಯ ಸದಸ್ಯನಾಗಿ ಘನವೇತ್ತ ಕರ್ನಾಟಕದ ರಾಜ್ಯಪಾಲರು ನಾಮನಿರ್ದೇಶನ ಮಾಡಿದ್ದಾರೆಂದು ತಿಳಿಸಲು ಹರ್ಷಿತನಾಗಿದ್ದೇನೆ.
ರಾಜ್ಯ ಸರ್ಕಾರ ಸಹಕಾರದಿಂದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ನಾಮನಿರ್ದೇಶನ ಸದಸ್ಯನಾಗಿ ನೇಮಕವಾಗಿದ್ದೇನೆ.. ನನ್ನನ್ನು ನಾಮನಿರ್ದೇಶನ ಮಾಡಿದ ಸರ್ಕಾರಕ್ಕೆ ನಾನು ಅಭಾರಿಯಾಗಿದ್ದು, ಇನ್ನು ಹೆಚ್ಚಿನ ರೀತಿಯಲ್ಲಿ ರೈತಪರ ಕೆಲಸ ಮಾಡುವೆ. ರೈತಪರ ಕೆಲಸಕ್ಕೆ ಇದೇ ರೀತಿ ಎಲ್ಲರ ಸಹಕಾರ ಇರಲಿ
——— ಮಹಾಂತೇಶಗೌಡ .ಬ. ಪಾಟೀಲ, ನೂತನ ನಾಮನಿರ್ದೇಶನ ಗೌರವಾನ್ವಿತ ಆಡಳಿತ ಮಂಡಳಿ ಸದಸ್ಯರು
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ
More Stories
ಮಠ-ಮಂದಿರಗಳಿಗೆ ಮಂಜೂರಾದ ಅನುದಾನ ಬಿಡುಗಡೆಗೆ 25% ಕಮೀಷನ್: ಜಿ. ಜನಾರ್ಧನ ರೆಡ್ಡಿ ಗಂಭೀರ ಆರೋಪ
ಹಿರಿಯ ಚೇತನ ಸುಡುಗಾಡು ಸಿದ್ದ ವಿರೂಪಾಕ್ಷಪ್ಪ ಕಲ್ಯಾಣದವರು ಅವರಿಗೆ ಶ್ರದ್ಧಾಂಜಲಿ
Kkk