September 14, 2025

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: ಅರ್ಹತಾ ಪಟ್ಟಿ ಪ್ರಕಟ

ಜೂಡಿ ನ್ಯೂಸ್ :

ಕೊಪ್ಪಳ ಡಿಸೆಂಬರ್ 26 : ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಸಂಬಂಧ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

 ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 16 ಹುದ್ದೆಗಳಿಗೆ ಮತ್ತು ಕಲ್ಯಾಣ ಕರ್ನಾಟಕ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 3 ಹುದ್ದೆಗಳಿಗೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಕೊಪ್ಪಳ ಜಿಲ್ಲಾ ವೆಬ್‌ಸೈಟ್ koppal.nic.in ರಲ್ಲಿ ಪ್ರಕಟಿಸಲಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.