ಜೂಡಿ ನ್ಯೂಸ್ :
ಪ್ಲಾಸ್ಟಿಕ್ ತ್ಯಜಿಸೋಣ, ಭೂಮಿ ಉಳಿಸೋಣ…
ಇಂದು ವಿಶ್ವ ಪರಿಸರ ದಿನ.ಪ್ರತಿ ವರ್ಷ ಜೂನ್ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ.ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ ಎಂದರೆ ತಪ್ಪಾಗಲಾರದು.
ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ.
ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ. ಪ್ರತಿವರ್ಷ150ಕ್ಕೂ ಹೆಚ್ಚು ದೇಶಗಳು ಈ ದಿನದಲ್ಲಿ ಭಾಗಿಯಾಗುತ್ತವೆ. ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ವಿವಿಧ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಪ್ರಮುಖ ಸಂಸ್ಥೆಗಳು,ಸ್ವಯಂಸೇವಾ ಸಂಸ್ಥೆಗಳು, ಸಮುದಾಯಗಳು, ಸರ್ಕಾರಗಳು ವಿಶ್ವಾದ್ಯಂತ ಪರಿಸರ ದಿನವನ್ನು ವಿವಿಧ ರೀತಿಯಲ್ಲಿ ಆಚರಿಸುತ್ತವೆ.
ವಿಶ್ವ ಪರಿಸರ ದಿನ ಆಚರಣೆಯ ಏಕೆ?
ವಿಶ್ವ ಪರಿಸರ ದಿನವನ್ನು 1974 ರಲ್ಲಿ ವಿಶ್ವಸಂಸ್ಥೆಯ ಅನುಮೋದನೆಯೊಂದಿಗೆ ಆರಂಭಿಸಲಾಯಿತು. ಈ ಕುರಿತು 1972 ರಲ್ಲಿಯೇ ಚರ್ಚೆಗಳು ಆರಂಭವಾಗಿತ್ತು. ಆದರೆ ಎರಡು ವರ್ಷಗಳ ಕಾಲ ಈ ಚರ್ಚೆ ನಡೆಸಿ, 1974 ಜೂನ್ 5 ರಂದು ಮೊದಲು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ವಿಶ್ವ ಪರಿಸರದಿನವನ್ನು ಒಂದು ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ.
ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜೂನ್ 5 ರಂದು ಆಚರಿಸಲಾಗುತ್ತದೆ. ಜೂನ್ ತಿಂಗಳ 5ನೇ ತಾರೀಖಿನಿಂದ ಜೂನ್ 16ರ ವರೆಗೆ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ದಿನಗಳಲ್ಲಿ ಎಲ್ಲಡೆ ಸಸಿಗಳನ್ನು ನೆಡಲಾಗುತ್ತದೆ. ಮತ್ತು ಪರಿಸರಕ್ಕೆ ಸಂಬಂಧಿಸಿದ ಅನೇಕ ಜಾಗೃತಿ ಕೆಲಸಗಳನ್ನು ಮಾಡಲಾಗುತ್ತದೆ.
ಪ್ರತಿಯೊಬ್ಬರಲ್ಲು ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 5ರಂದು ವಿಶ್ವಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ.
2025 ರ ವಿಶ್ವ ಪರಿಸರ ದಿನದ ಧೇಯವಾಕ್ಯ
ವಿಶ್ವ ಪರಿಸರ ದಿನವು ಪರಿಸರದ ಮೇಲೆ ಒತ್ತಡ ಹೇರುವ ಸವಾಲುಗಳ ಮೇಲೆ ಬೆಳಕು ಚೆಲ್ಲುತ್ತದೆ. ಪ್ರತಿ ವರ್ಷ, ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಏರಿಕೆ ಮತ್ತು ಅರಣ್ಯನಾಶದಂತಹ ಸಮಸ್ಯೆಗಳನ್ನು ನಿಭಾಯಿಸಲು ಒಂದು ವಿಶಿಷ್ಟ ವಿಷಯವನ್ನು ಆಯ್ಕೆ ಮಾಡಲಾಗುತ್ತದೆ. ಈ ವರ್ಷದ ವಿಶ್ವ ಪರಿಸರ ದಿನದ ವಿಷಯ ‘ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅಂತ್ಯ ಹಾಡುವುದಾಗಿದೆ.
ಪ್ಲಾಸ್ಟಿಕ್ ಮಾಲಿನ್ಯವು ನಮ್ಮ ಗ್ರಹ ಎದುರಿಸುತ್ತಿರುವ ಮೂರು ಬೆದರಿಕೆಗಳಾದ ಹವಾಮಾನ ಬದಲಾವಣೆ, ಜೀವವೈವಿಧ್ಯತೆಯ ನಷ್ಟ ಮತ್ತು ಮಾಲಿನ್ಯವನ್ನು ಇನ್ನಷ್ಟು ಹದಗೆಡಿಸುತ್ತದೆ. ಪ್ರತಿ ವರ್ಷ, 11 ಮಿಲಿಯನ್ ಟನ್ ಪ್ಲಾಸ್ಟಿಕ್ ತ್ಯಾಜ್ಯವು ನೀರಿನ ಪರಿಸರ ವ್ಯವಸ್ಥೆಗಳನ್ನು ಕಲುಷಿತಗೊಳಿಸುತ್ತದೆ, ಆದರೆ ಒಳಚರಂಡಿ ಮತ್ತು ಭೂಕುಸಿತಗಳಿಂದ ಬರುವ ಸೂಕ್ಷ್ಮ ಪ್ಲಾಸ್ಟಿಕ್‌ಗಳು ಮಣ್ಣಿನಲ್ಲಿ ಸಂಗ್ರಹವಾಗುತ್ತವೆ, ಪರಿಸರಕ್ಕೆ ಹಾನಿ ಮಾಡುತ್ತವೆ. ಪ್ಲಾಸ್ಟಿಕ್ ನಿಂದಾಗುವ ಮಾಲಿನ್ಯನಿಯಂತ್ರಣಕ್ಕೆ ನಾವುಗಳು ಇಂದು ಸಂಕಲ್ಪಮಾಡೋಣ,ಇರುವ ನಮ್ಮ ಪರಿಸರ ಕಾಪಡೋಣ.
ವರದಿ : ಜಿ.ವಿ.ಸುಬ್ಬರಾವ್
More Stories
ಗ್ರಾಮ ಪಂಚಾಯತಿ ಸದಸ್ಯನ ಸಂಭಾವನೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ…
ಮಠ-ಮಂದಿರಗಳಿಗೆ ಮಂಜೂರಾದ ಅನುದಾನ ಬಿಡುಗಡೆಗೆ 25% ಕಮೀಷನ್: ಜಿ. ಜನಾರ್ಧನ ರೆಡ್ಡಿ ಗಂಭೀರ ಆರೋಪ
ಹಂಪಾಪಟ್ಟಣದಲ್ಲಿ ಮೊಹರಂ ವಿಶೇಷ ಆಚರಣೆ