January 31, 2026

ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾಗಿ ಎ. ಕೇಶವಮೂರ್ತಿ ಆಯ್ಕೆ

ಜೂಡಿ ನ್ಯೂಸ್ :

ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾಗಿ ಎ. ಕೇಶವಮೂರ್ತಿ ಆಯ್ಕೆ

ಹಗರಿಬೊಮ್ಮನಹಳ್ಳಿ : ಕನ್ನಡ ಜಾನಪದ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷರಾಗಿ ಎ ಕೇಶವಮೂರ್ತಿ ಅವರನ್ನು ಆಯ್ಕೆ ಮಾಡಿ ರಾಜ್ಯ ಸಮಿತಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕನ್ನಡ ಜಾನಪದ ಪರಿಷತ್‌ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿರುವ ಕನ್ನಡ ಜಾನಪದ ಪರಿಷತ್‌ ರಾಜ್ಯ ಸಮಿತಿಯು ತಾಲೂಕಿನಾದ್ಯಂತ ಸಂಘಟನೆ ಕಟ್ಟುವ ನಿಟ್ಟಿನಲ್ಲಿ ತಾಲೂಕು ಅಧ್ಯಕ್ಷರನ್ನಾಗಿ ಎ. ಕೇಶವಮೂರ್ತಿ ಅವರನ್ನು ಆಯ್ಕೆಮಾಡಲಾಗಿದೆ ಎಂದು ಕನ್ನಡ ಜಾನಪದ. ಪರಿಷತ್ತು. ರಾಜ್ಯಾಧ್ಯಕ್ಷರಾದ ಡಾ. ಎಸ್.ಬಾಲಾಜಿ ಆದೇಶ ಹೊರಡಿಸಿದ್ದಾರೆ.  

ಕನ್ನಡ ಭಾಷೆ, ಸಾಹಿತ್ಯ, ನಮ್ಮ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ.