July 12, 2025

ಗ್ರಾಮ ಪಂಚಾಯತಿ ಸದಸ್ಯನ ಸಂಭಾವನೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ…

ಜೂಡಿ ನ್ಯೂಸ್ :

ಗ್ರಾಮ ಪಂಚಾಯತಿ ಸದಸ್ಯನ ಸಂಭಾವನೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ…

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣ ಗ್ರಾಮ ಪಂಚಾಯಿತಿಯ ಸದಸ್ಯರಾದ ಮಂಜುನಾಥ್ ರವರು ತನ್ನ ಪಂಚಾಯತಿಯ ಸದಸ್ಯರ ಸಂಭಾವನ ಅನುದಾನದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಬುಕ್ಕ ವಿತರಣೆ ಮಾಡಿದರು..

ಪುಸ್ತಕ ವಿತರಣಾ ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಜಾಗೃತ ವೇದಿಕೆ ರಾಜ್ಯ ಉಪಾಧ್ಯಕ್ಷರಾದ ಬುಡ್ಡಿ ಬಸವರಾಜ್ ಇವರು ನೆರವೇರಿಸಿ ಇಂದಿನ ದಿನಮಾನದಲ್ಲಿ ಕನ್ನಡ ಶಾಲೆಗಳ ಪರಿಸ್ಥಿತಿ ಹೇಳ ತೀರದ್ದು, ಇಂತಹ ಸಂದಿಗ್ಧ ಸಮಯದಲ್ಲಿ ತನ್ನ ಗ್ರಾಮ ಪಂಚಾಯಿತಿಯ ಸಂಭಾವನೆಯಲ್ಲಿ ಗ್ರಾಮದ ಸರ್ಕಾರಿ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದ, ಕ್ರಿಯಾಶೀಲ ಗ್ರಾಮ ಪಂಚಾಯಿತಿಯ ಸದಸ್ಯರಾದ ಟಿ ಮಂಜುನಾಥ್‍ರವರ ಕಾರ್ಯ ಸರ್ವರಿಗೂ ಪ್ರೇರಣಾದಾಯಕವಾದದ್ದು, ಎಲ್ಲಾ ನಾಗರಿಕ ಬಂಧುಗಳು ತಮ್ಮ ತಮ್ಮ ಗ್ರಾಮಗಳಲ್ಲಿರುವ ಸರ್ಕಾರಿ ಶಾಲೆಯನ್ನು ಉಳಿಸುವಲ್ಲಿ ಬೆಳೆಸುವಲ್ಲಿ ಕಂಕಣ ಬದ್ಧರಾಗಿ ಸರ್ಕಾರಿ ಶಾಲೆಗಳಿಗೆ ಹಲವಾರು ಕೊಡಿಗೆಳನ್ನು ನೀಡುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸುವಲ್ಲಿ ನಾಗರಿಕರ ಪಾತ್ರ ಮಹತ್ತರವಾದದ್ದು, ಇಂತಹ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಮಹತ್ವ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಉದ್ಘಾಟನೆ ನುಡಿಗಳ ನಾಡಿದರು.. ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರಾದ ಕಾರ್ಯಕ್ರಮದ ದಾನಿಗಳಾದ ಟಿ ಮಂಜುನಾಥ್‍ರವರು ಮಾತನಾಡಿ, ಜನಸೇವೆಯೇ ಜನಾರ್ದನ ಸೇವೆ ಎನ್ನುವುದು ನನ್ನ ಭಾವನೆ, ಇರುವ ಸಮಯದಲ್ಲಿ ಜನೋಪಯೋಗಿ ಕೆಲಸ ಮಾಡುತ್ತಾ, ಮುಖ್ಯವಾಗಿ ಭವಿಷ್ಯದ ರೂವಾರಿಗಳಾಗಿರುವ ವಿದ್ಯಾರ್ಥಿಗಳಿಗೆ ಶಿಕ್ಷಣದ ಬಗ್ಗೆ ಮಹತ್ವವನ್ನು ಸಾರಿ ಪ್ರತಿ ವರ್ಷವೂ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಮಾಡುತ್ತಿದ್ದೇನೆ, ಇದು ನನ್ನ ಅಳಿಲು ಸೇವೆ ಎಂದು ಮಾತನಾಡಿದರು.

ಗ್ರಾಮ ಪಂಚಾಯತಿ ಸದಸ್ಯರಾದ ಏನ್ ನಾಗರಾಜ್ ರವರು ವಿದ್ಯಾರ್ಥಿಗಳ ಬದುಕಿನಲ್ಲಿ ಶಿಕ್ಷಣ ಅತ್ಯಂತ ಮುಖ್ಯವಾದದ್ದು, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಏಳನೇ ತರಗತಿ ಇಂಥ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಉಪಯೋಗವ ಕಾರ್ಯವನ್ನು ಹಮ್ಮಿಕೊಂಡಿರುವ ಟಿ ಮಂಜುನಾಥ್ ರವರ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಕಾರ್ಯಕ್ರಮದಲ್ಲಿ ಮಾತನಾಡಿದರು ಈ ಸಂದರ್ಭದಲ್ಲಿ ಹಂಪಾಪಟ್ಟಣ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ 

  ಶ್ರೀಮತಿ ಹುಲಿಗೆಮ್ಮ ಕಾಳಪ್ಪ. ಮುಖ್ಯ ಅತಿಥಿಗಳಾಗಿ. ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು, ಹಾಗೆ ಸದಸ್ಯರಾದ ಬಲ್ಲಹುಣಿಸೆ ನಾಗರಾಜ್ ಎಸ್ ಗಾಳೆಪ್ಪ. ವಿಎಸ್ಎಸ್ಏನ್ ಸದಸ್ಯ ಕೆ ಹುಲುಗಪ್ಪ. ಕೇಶವಮೂರ್ತಿ ಕನ್ನಡ ಜಾನಪದ ಪರಿಷತ್ ತಾಲೂಕ್ ಅಧ್ಯಕ್ಷರು. ಉಪ್ಪಾರ್ ಕನಕಪ್ಪ. ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು. ತೀರ್ಥ ಪ್ರಸಾದ . ಡಾ ಬಿಆರ್ ಅಂಬೇಡ್ಕರ್ ಸಂಘದ ಅಧ್ಯಕ್ಷರು. ಸುರೇಶ್ ಕಲಾಲ್. ಪ್ರಭಾರಿ ಮುಖ್ಯ ಶಿಕ್ಷಕರು ಉಮೇಶ್. ಹಾಗೂ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.