ಜೂಡಿ ನ್ಯೂಸ್ :
ಕೊಪ್ಪಳ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಟಿ.ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ
ಕೊಪ್ಪಳ ಆಗಸ್ಟ್ 01 : ಕೊಪ್ಪಳ ಜಿಲ್ಲಾ ಪಂಚಾಯತ್ ನೂತನ ಉಪ ಕಾರ್ಯದರ್ಶಿಯಾಗಿ ಟಿ.ಕೃಷ್ಣಮೂರ್ತಿ ಅವರು ಜುಲೈ. 31 ರಂದು ಗುರುವಾರ ಅಫರಾಹ್ನ ಅಧಿಕಾರ ಸ್ವೀಕರಿಸಿದರು.
ಕೊಪ್ಪಳ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಧಾರವಾಡ ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನೆಲೆ ಈ ಸ್ಥಾನಕ್ಕೆ ಟಿ.ಕೃಷ್ಣಮೂರ್ತಿ ಅವರನ್ನು ಸರ್ಕಾರದ ನೇಮಿಸಿದೆ.
ಟಿ.ಕೃಷ್ಣಮೂರ್ತಿ ಅವರು ವಿಜಯಪುರ ಜಿಲ್ಲೆಯ ಸಹಕಾರ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರು ಈ ಹಿಂದೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕೊಪ್ಪಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಕೊಪ್ಪಳ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಯೋಜನಾ ನಿರ್ದೇಶಕ ಪ್ರಕಾಶ ವಿ. ಸೇರಿದಂತೆ ಜಿಲ್ಲಾ ಪಂಚಾಯತ್ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
More Stories
ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಸೆ. 18 ರಂದು ಆರೋಗ್ಯ ತಪಾಸಣಾ ಶಿಬಿರ
ದಾನಿ ಸುಬ್ಬಾರೆಡ್ಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಹಂಪಾಪಟ್ಟಣ ನಾಗರಿಕರು..
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆ