July 12, 2025

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಜೂಡಿ ನ್ಯೂಸ್ :

ಹೊಸಪೇಟೆ : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಗೃಹ ಸಚಿವರಾದ ಅಮಿತ್ ಷಾ ಅವರು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು “ಅಂಬೇಡ್ಕರ್, ಅಂಬೇಡ್ಕರ್ ಅನ್ನುವುದು ಒಂದು ವ್ಯಸನ ಆಗಿಬಿಟ್ಟಿದೆ ಎಂದು ಇಡೀ ದೇಶಕ್ಕೆ ಸಂವಿಧಾನ ಕೊಟ್ಟ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿ ಮಾತನಾಡಿದ್ದಾರೆ.

ಅಮಿತ್ ಷಾ ಅವರು ಕೇಂದ್ರ ಸಚಿವರಾಗಲು ಅರ್ಹರಲ್ಲ. ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ಜೈಭೀಮ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂಧರ್ಭದಲ್ಲಿ ಮುಖಂಡರಾದ ಮರಡಿ ಜಂಬಯ್ಯ ನಾಯಕ, ನಿಂಬಗಲ್ ರಾಮಕೃಷ್ಣ, ಬಣ್ಣನೆ ಸೋಮಶೇಖರ್, ಸಣ್ಣಮಾರೆಪ್ಪ, ಎನ್.ವೆಂಕಟೇಶ, ಈಡಿಗರ ಮಂಜುನಾಥ ಸೇರಿದಂತೆ ಇತರರು ಇದ್ದರು.