ಜೂಡಿ ನ್ಯೂಸ್ :
ಆ. 26 ರಂದು ಶ್ರೀ ಕ್ಷೇತ್ರ ಹುಲಿಗಿಯಲ್ಲಿ ತುಂಗಭದ್ರ ಆರತಿ ಮಹೋತ್ಸವ
ಕೊಪ್ಪಳ ಆಗಸ್ಟ್ 21 : ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಶ್ರೀ ಕ್ಷೇತ್ರ ಹುಲಿಗಿಯಲ್ಲಿ ತುಂಗಭದ್ರ ಆರತಿ ಮಹೋತ್ಸವ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಆ. 26 ರಂದು ಸಂಜೆ 6.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ತುಂಗಭದ್ರ ಆರತಿ ಮಹೋತ್ಸವ ನಿಮಿತ್ತ ಆ. 24ರ ರವಿವಾರ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಗಣಪತಿ ಹೋಮ, ಆ. 25ರ ಸೋಮವಾರ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮೃತ್ಯುಂಜಯ ಹೋಮ ನಡೆಯಲಿದೆ.
ಆ. 26ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಚಂಡಿಕಾ ಹೋಮ, ನಂತರ ಮಧ್ಯಾಹ್ನ 12.30 ರಿಂದ 3 ಗಂಟೆಯವರೆಗೆ ಭಕ್ತರಿಗೆ ವಿಶೇಷ ಅನ್ನ ಸಂತರ್ಪಣೆ, ಸಂಜೆ 4 ರಿಂದ 5.30 ರವರೆಗೆ ಮಾಹಿಳೆಯರಿಂದ ಕುಂಭ ಮೆರೆವಣಿಗೆ, ಸಂಜೆ 5.30 ರಿಂದ 6 ಗಂಟೆಯವರೆಗೆ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಮತ್ತು ಸಂಜೆ 5.30 ರಿಂದ 6.30 ಗಂಟೆಯವರೆಗೆ ನದಿ ತಟದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
More Stories
ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಸೆ. 18 ರಂದು ಆರೋಗ್ಯ ತಪಾಸಣಾ ಶಿಬಿರ
ದಾನಿ ಸುಬ್ಬಾರೆಡ್ಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಹಂಪಾಪಟ್ಟಣ ನಾಗರಿಕರು..
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆ